ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡು, ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ದ‌.ಕ. ಸಂಪಾಜೆ ಎಂಬಲ್ಲಿ ಮೇ.3ರ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದಿದೆ.

ಈ ಪರಿಣಾಮ ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ಅವರ ಪತ್ನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ಸೇರಿ ಅಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!