ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ನಿಧನ

ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ನಿಧನ

ಬೆಳ್ತಂಗಡಿ: ಇಲ್ಲಿನ ವಾಣಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಪುದುವೆಟ್ಟು ಗ್ರಾಮದ ಎಟ್ಯೋಡು ಮನೆ ನಿವಾಸಿ ನಂದಕುಮಾರ್(37) ಶುಕ್ರವಾರ ನಿಧನರಾದರು.

ಅವರು 14 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಎರಡು ತಿಂಗಳಿನಿಂದ ದೊಡ್ಡ ಕರಳು ಹಾಗು ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರು ಕೆ ಎಂ ಸಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಇವರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಅಗಲಿದ್ದಾರೆ.

Leave a Reply

You May Have Missed

error: Content is protected !!