ಸಿಡಿಲು ಬಡಿದು ನವವಿವಾಹಿತ ಸಾವು

ಸಿಡಿಲು ಬಡಿದು ನವವಿವಾಹಿತ ಸಾವು

ಸಿಡಿಲು ಬಡಿದು ನವವಿವಾಹಿತರೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್‌ (34) ಮೃತಪಟ್ಟವರು.

ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಆಗ ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಸೋಮಸುಂದರ್‌ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಮೃತಪಟ್ಟಿದ್ದರು. ಸೋಮ ಸುಂದರ್‌ ಅವರು ಸುಬ್ರಹ್ಮಣ್ಯ ಸಮೀಪ ಕಾರ್‌ ವಾಷಿಂಗ್‌ ಉದ್ಯಮ ನಡೆಸಿಕೊಂಡಿದ್ದು, 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!