ಎಸ್. ಎಸ್. ಎಲ್. ಸಿ ಪರೀಕ್ಷೆ ಫಲಿತಾಂಶ – ಉಡುಪಿ ಜಿಲ್ಲೆ ಪ್ರಥಮ : BEO ಅವರಿಗೆ ಅಭಿನಂದನೆ

ಎಸ್. ಎಸ್. ಎಲ್. ಸಿ ಪರೀಕ್ಷೆ ಫಲಿತಾಂಶ – ಉಡುಪಿ ಜಿಲ್ಲೆ ಪ್ರಥಮ : BEO ಅವರಿಗೆ ಅಭಿನಂದನೆ

ಈ ಬಾರಿಯ ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದ ಶುಭ ಸಂದರ್ಭದಲ್ಲಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ಯಲ್ಲಮ್ಮ ರವರನ್ನು ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಪ್ರವರ್ತಕರಾದ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇದರ ನಿರ್ದೇಶಕ ಶ್ರೀ ಮನೋಜ್ ಕಡಬ ಅಭಿನಂದಿಸಿ- ಈ ಗೌರವವು ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರುಗಳಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಣ ಇಲಾಖೆಯ ಕಚೇರಿ ಸಿಬ್ಬಂದಿಗಳಿಗೆ ಸಲ್ಲುತ್ತದೆ ಎಂದರು.

ಉಡುಪಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ಸತ್ಯಸಾಯಿ ಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕ ಶ್ರೀ ಸಂತೋಷ್ ಕುಮಾರ್, ಅಧೀಕ್ಷಕ ಶ್ರೀ ಜಯಪ್ರಕಾಶ್ ಭಟ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶ್ರೀ ಚಂದ್ರಶೇಖರ ಸುವರ್ಣ, ಶಿಕ್ಷಣ ಸಂಯೋಜಕ ಶ್ರೀ ಪವನ್ ಕುಮಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!