ಅವಿವಾಹಿತ ಅತಿಥಿ ಉಪನ್ಯಾಸಕಿ ನೇಣಿಗೆ ಶರಣು

ಅವಿವಾಹಿತ ಅತಿಥಿ ಉಪನ್ಯಾಸಕಿ ನೇಣಿಗೆ ಶರಣು

ಅತಿಥಿ ಉಪನ್ಯಾಸಕಿಯೊಬ್ಬರುನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ. ಮೃತ ದೀಪಾ ಅವರು ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!