ಅಡ್ಡಹೊಳೆ: ಕಾರು,ಬಸ್ಸು ಡಿಕ್ಕಿ-ಜಖಂ

ಅಡ್ಡಹೊಳೆ: ಕಾರು,ಬಸ್ಸು ಡಿಕ್ಕಿ-ಜಖಂ

ನೆಲ್ಯಾಡಿ: ಕಾರು ಹಾಗೂ ಬಸ್ಸು ಮುಖಾಮುಖಿ ಡಿಕ್ಕಿಯಾಗಿ ಎರಡೂ ವಾಹನಗಳು ಜಖಂಗೊಂಡಿರುವ ಘಟನೆ ಮೇ.12ರಂದು ಸಂಜೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ಸು ಹಾಗೂ ಧರ್ಮಸ್ಥಳದಿಂದ ಹಾಸನಕ್ಕೆ ತೆರಳುತ್ತಿದ್ದ ಅಲ್ಟೋ ಕಾರಿನ ನಡುವೆ ಅಡ್ಡಹೊಳೆಯಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹನಗಳಿಗೆ ಹಾನಿಯಾಗಿದ್ದು ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದಾರೆ.

ನೆಲ್ಯಾಡಿ ಹೊರಠಾಣೆ ಹೆಡ್‌ಕಾನ್‌ಸ್ಟೇಬಲ್ ಕುಶಾಲಪ್ಪ ನಾಯ್ಕ್, ಸಿಬ್ಬಂದಿ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!