ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರಿಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾಧ್ (22) ಮೃತ ಯುವಕ. ನಿಷಾಧ್ ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರಲ್ಲಿ ಸಹಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ‌ ಬಂದು ಗ್ಲೋಬಲ್ ಮಾರ್ಕೆಟ್ಗೆ ಕ್ರಾಸ್ ಆಗುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರಿನ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನಿಷಾಧ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರ ಹಫೀಝ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮೊತ್ತೋರ್ವ ಸ್ಕೂಟರ್ ಸವಾರ ಕುತ್ತಾರು ಪದವು ನಿವಾಸಿ ಅಬ್ಬೂಬಕ್ಕರ್ ಸಿದ್ದಿಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

You May Have Missed

error: Content is protected !!