ಜೀಪ್‌ ಢಿಕ್ಕಿ; ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ

ಜೀಪ್‌ ಢಿಕ್ಕಿ; ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ

ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಗುರುವಾರ ನಡೆದಿದೆ.

ಸೋಣಂದೂರು ನಿವಾಸಿ ಮಹಮ್ಮದ್ ಅರ್ಫಾಸ್ ಗಾಯಗೊಂಡಿದ್ದು, ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪನ್ನು ಚಾಲಕ ವಸಂತ ಶೆಟ್ಟಿ ಎಂಬಾತ ಒಮ್ಮೆಲೆ ಬಂಟ್ವಾಳ ಕಡೆಗೆ ತಿರುಗಿಸಿದಾಗ ಬಿಸಿರೋಡಿನ ಕಡೆಯಿಂದ ಬರುತ್ತಿದ್ದ ಅರ್ಫಾಸ್ ಅವರ ದ್ವಿಚಕ್ರಕ್ಕೆ ಡಿಕ್ಕಿಯಾಗಿದೆ. ಕೂಡಲೇ ಸ್ಥಳೀಯರು ಗಾಯಗೊಂಡ ಅರ್ಫಾಸ್ ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಠಾಣಾಧಿಕಾರಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!