ಎಡಮಂಗಲದ ಯುವಕ ಆತ್ಮಹತ್ಯೆ

ಎಡಮಂಗಲದ ಯುವಕ ಆತ್ಮಹತ್ಯೆ

ಬೆಂಗಳೂರಿನಲ್ಲಿ ಎಡಮಂಗಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪುಚ್ಚಜ್ಜೆ ನಿವಾಸಿ ದಿ.ಪುಟ್ಟಣ್ಣ ಗೌಡ ಎಂಬವರ ಪುತ್ರ ಪ್ರಸನ್ನ ಕುಮಾರ್(26) ಮೃತರು.

ಮೃತರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ರವಿವಾರ ರಾತ್ರಿ ಪಾಳಿನ ಕೆಲಸ ನಿರ್ವಹಿಸುತ್ತಿದ್ದು ಸೋಮವಾರ ಬೆಳಗ್ಗೆ ಸಂಸ್ಥೆಯ ಕೊಠಡಿಯಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತರಿಗೆ ತಾಯಿ, ಇಬ್ಬರು ಸಹೋದರರು ಇದ್ದಾರೆ.

Leave a Reply

You May Have Missed

error: Content is protected !!