ಕೊಕ್ಕಡ: ಸಾಮಾಜಿಕ ಧುರೀಣ ತುಕ್ರಪ್ಪ ಶೆಟ್ಟಿ ನೂಜೆ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷರ ಭೇಟಿ

ಕೊಕ್ಕಡ: ಸಾಮಾಜಿಕ ಧುರೀಣ ತುಕ್ರಪ್ಪ ಶೆಟ್ಟಿ ನೂಜೆ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷರ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಾಮಾಜಿಕ ಧುರೀಣ ತುಕ್ರಪ್ಪ ಶೆಟ್ಟಿ ನೂಜೆ ಮನೆಗೆ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾದ ನಾಗೇಂದ್ರ ಅವರು ಭೇಟಿ ನೀಡಿದರು.

ಬಳಿಕ ಹಿಂದಿನ ಹಾಗೂ ಇವತ್ತಿನ ಬಿಜೆಪಿ ಪಕ್ಷಗಳ ಆಗುಹೋಗುಗಳ ಬಗ್ಗೆ, ಕೆಲವು ಸ್ವಾರ್ಥ ರಾಜಕೀಯ ವ್ಯಕ್ತಿಗಳಿಂದಾಗಿ ಪಕ್ಷ ಹಾಳಾಗುತ್ತಿರುವುದರ ಬಗ್ಗೆ ಹಾಗೂ ಮುಂದಿನ ಬೆಳವಣಿಗೆಗಳ ಬಗ್ಗೆ ಸಂಪೂರ್ಣವಾಗಿ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಈ ಬಗ್ಗೆ ರಾಜ್ಯಾಧ್ಯಕ್ಷರ ಬಳಿ ಚರ್ಚಿಸಲಾಗುವುದೆಂದು ನಾಗೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಅಮಿತ್ ಶೆಟ್ಟಿ, ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!