ನೆಲ್ಯಾಡಿ: ಬೈಕ್ ಪಲ್ಟಿ-ಸಹಸವಾರನಿಗೆ ಗಾಯ

ನೆಲ್ಯಾಡಿ: ಬೈಕ್ ಪಲ್ಟಿ-ಸಹಸವಾರನಿಗೆ ಗಾಯ

ನೆಲ್ಯಾಡಿ:ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್‌ನ ಸಹಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೇ 25ರಂದು ಬೆಳಿಗ್ಗೆ ನೆಲ್ಯಾಡಿ ಗ್ರಾಮದ ಮಕ್ಕಿಗದ್ದೆ ಎಂಬಲ್ಲಿ ನಡೆದಿದೆ.

ಮಾದೇರಿ ಕಡೆಯಿಂದ ಶಾಸ್ತಾರೇಶ್ವರ ದೇವಸ್ಥಾನದ ಕಡೆಗೆ ರಾಮ್ ರಾಜ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಮಕ್ಕಿಗದ್ದೆ ಎಂಬಲ್ಲಿ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿಯಾಗಿದೆ. ಪರಿಣಾಮ ಸಹ ಸವಾರ ಸ್ವಸ್ತಿಕ್ ಎಂಬವರು ಗಂಭೀರ ಗಾಯಗೊಂಡಿದ್ದು ಅವರನ್ನು ರಿಕ್ಷಾದಲ್ಲಿ ನೆಲ್ಯಾಡಿಯ ಆಶ್ವಿನಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಬೈಕ್ ಸವಾರ ರಾಮ್‌ರಾಜ್‌ಗೆ ಸಣ್ಣಪುಟ್ಟ ಗಾಯವಾಗಿದೆ.

ಈ ಬಗ್ಗೆ ಮಕ್ಕಿಗದ್ದೆ ನಿವಾಸಿ ಗೋಪಾಲಕೃಷ್ಣ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!