ಕೊಕ್ಕಡ: ಗೇರು ನಿಗಮದ ತೋಟದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕೊಕ್ಕಡ: ಗೇರು ನಿಗಮದ ತೋಟದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕೊಕ್ಕಡ: ಕೊಕ್ಕಡ ಗ್ರಾಮದ ಹಿತ್ತಿಲು ಸಮೀಪ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 29ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ವ್ಯಕ್ತಿ ಸುಮಾರು 4 & 5 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮೃತ ವ್ಯಕ್ತಿಯ ಪಕ್ಕದಲ್ಲಿ ಬ್ಯಾಗ್ ದೊರೆತಿದ್ದು ಅದರಲ್ಲಿ ಬೆಂಗಳೂರಿಂದ-ಹಾಸನ, ಹಾಸನದಿಂದ-ಕೊಕ್ಕಡಕ್ಕೆ ಮೇ.24 ರಂದು ಪ್ರಯಾಣಿಸಿರುವ ಬಸ್ಸು ಟಿಕೆಟ್ ಹಾಗೂ ಬ್ಯಾಂಕ್ ಎಟಿಎಂ ಕಾರ್ಡ್ ನಲ್ಲಿ ಲಿಂಗಣ್ಣ ಎಂದು ನಮೂದಿಸಲಾಗಿದೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಸಮರ್ಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಅರಸಿನಮಕ್ಕಿ ಹಾಗೂ ಶಿಶಿಲ ಶೌರ್ಯ ಘಟಕದ ತಂಡವರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತ ದೇಹವನ್ನುಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Leave a Reply

You May Have Missed

error: Content is protected !!