ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

ಖಾಸಗಿ ಕಾಲೇಜು ಬಸ್ಸು ಹಾಗೂ ಖಾಸಗಿ ಬಸ್ಸುಗಳೆರಡರ ನಡುವೆ ಅಪಘಾತ ಸಂಭವಿಸಿದ ಘಟನೆ ನಾಟೆಕಲ್ ಉರುಮಣೆ ಸಮೀಪ ಸೋಮವಾರ ಸಂಭವಿಸಿದೆ.

ಖಾಸಗಿ ಕಾಲೇಜಿಗೆ ಸೇರಿದ ಕಾಲೇಜು ಬಸ್ ಹಾಗೂ ಮಂಗಳೂರಿನಿಂದ ಮುಡಿಪು ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ಸುಗಳ ಮಧ್ಯೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಸಣ್ಣಪುಟ್ಟ ಗಾಯಗೊಂಡಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌. ಘಟನೆ ಕುರಿತು ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

You May Have Missed

error: Content is protected !!