ಕೆಸಿಇಟಿ ಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಕೆಸಿಇಟಿ ಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ನೆಲ್ಯಾಡಿ: 2024-25ನೇ ಸಾಲಿನ ಕೆಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ನೀಡಿ ಅಮೋಘ ಸಾಧನೆಗೈದಿದ್ದಾರೆ.

ಶರಣ್ ಲಿಯೊ ಪಾಯಿಸ್, ಬಿನ್ಸಿ ಜೋಸೆಫ್ ವಿದ್ಯಾರ್ಥಿಗಳು ಅತ್ಯುತ್ತಮ ರ್‍ಯಾಂಕ್ ಪಡೆಯುವುದರೊಂದಿಗೆ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ವರ್ಗೀಸ್ ಕೈಪನಡ್ಕ ಅಭಿನಂದಿಸಿದ್ದಾರೆ ಹಾಗೂ ಮಕ್ಕಳ ಮುಂದಿನ ವೃತ್ತಿ ಶಿಕ್ಷಣದಲ್ಲಿ ಅವರ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ ಎಂದು ಹಾರೈಸಿದರು. ವಿದ್ಯಾರ್ಥಿಗಳ ಸಾಧನೆಯನ್ನು ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಶುಭ ಹಾರೈಸಿದರು.

Leave a Reply

You May Have Missed

error: Content is protected !!