ಬಸ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವು

ಬಸ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಢಿಕ್ಕಿಯಾಗಿ ಮೃತಪಟ್ಟ ಘಟನೆ ಭಾನುವಾರ(ಜೂನ್. 9 ರಂದು) ಬೆಳಿಗ್ಗೆ ತುಂಬೆಯಲ್ಲಿ ನಡೆದಿದೆ.

ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಮನೆಗೆ ಸಾಮಾಗ್ರಿಗಳನ್ನು ತರುವ ಉದ್ದೇಶದಿಂದ ತುಂಬೆ ಪೇಟೆಗೆ ಹೋಗುತ್ತಿದ್ದ ಸೇಸಪ್ಪ ಅವರು ವೈಶಾಲಿ ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ಢಿಕ್ಕಿಯಾಗಿದೆ.

ಢಿಕ್ಕಿಯ ರಭಸಕ್ಕೆ ತಲೆ ಹಾಗೂ ಮುಖಕ್ಕೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟ ‌ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಸಿಬ್ಬಂದಿಗಳು ಬೇಟಿ ‌ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!