ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಭಾನುವಾರ (ಜೂ.16 ರಂದು) ಸಂಜೆ ಸಂಭವಿಸಿದೆ.
ಆಲ್ಟೊ ಮತ್ತು ಬೋಲೆರೋ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಲ್ಟೊ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಸೋಮವಾರಪೇಟೆ ಮೂಲದ ಲೋಕೇಶ್, ರವೀಂದ್ರ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಬೋಲೆರೋ ವಾಹನದಲ್ಲಿದ್ದವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರಿನಿಂದ ಮಡಿಕೇರಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
























Leave a Reply