ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿ ಪರಿಷತ್ತಿನ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿ ಕಡಬ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಮಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಾ ಲೂಯಿಸಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಂಚಾಲಕ ವಂದನೀಯ ಫಾ.ಅನೀಶ್ ಫಿಲಿಫ್ ಶುಭಹಾರೈಸಿದರು. ಸಹ ಶಿಕ್ಷಕಿ ವಿಮಲಾ ಪ್ರಸ್ತಾವಿಕ ಮಾತುಗಳಾಡಿದರು.

ಶಾಲಾ ಸಹ ಶಿಕ್ಷಕಿ ರೆಹಮತ್ ಸ್ವಾಗತಿಸಿದರು, ಸಹಪಠ್ಯ ಚಟುವಟಿಕೆಗಳ ಕಾರ್ಯದರ್ಶಿ ತನ್ವಿ ವಂದಿಸಿದರು. ಸಹ ಶಿಕ್ಷಕಿ ಉಷಾ.ಕೆ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Leave a Reply

You May Have Missed

error: Content is protected !!