ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ 10ನೇ ವರ್ಷದ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.

ಖ್ಯಾತ ಯೋಗ ತರಬೇತುದಾರ ವಿಜೇಶ್ ಅವರು ವಿದ್ಯಾರ್ಥಿಗಳಿಗೆ ಯೋಗಭ್ಯಾಸದ ಕುರಿತಾಗಿ ಮಾಹಿತಿಯನ್ನು ನೀಡಿದರು. ‘ಸ್ವಯಂ ಮತ್ತು ಸಮಾಜಕ್ಕಾಗಿ’ ಯೋಗ ಎಂಬ ಈ ವರ್ಷದ ಪರಿಕಲ್ಪನೆಯ ಅಡಿಯಲ್ಲಿ ಯೋಗ ಪ್ರದರ್ಶನವನ್ನು ನೆರವೇರಿಸಲಾಯಿತು. ತರಬೇತುದಾರ ವಿಜೇಶ್ ಅವರಿಗೆ ಸಂಸ್ಥೆಯ ವತಿಯಿಂದ ಪ್ರಾಂಶುಪಾಲರು ಶಾಲು ಹಾಕಿ ಗೌರವಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ್ ಅವರು ಯೋಗ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳನ್ನು ತಯಾರು ಪಡಿಸಿದ್ದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸತೀಶ್ ಭಟ್ ಬಿಳಿನೆಲೆ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!