ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜು ನಲ್ಲಿ ವಿಶ್ವ ಯೋಗ ದಿನಾಚರಣೆ

ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜು ನಲ್ಲಿ ವಿಶ್ವ ಯೋಗ ದಿನಾಚರಣೆ

ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜು ನಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಎಸ್ ಡಿ ಎಂ ನ್ಯಾಚುರೋಪತಿ ಮತ್ತು ಯೋಗಿಕ್ ಕಾಲೇಜಿನ 4 ವೈದ್ಯಕೀಯ ವಿದ್ಯಾರ್ಥಿಗಳು ಸುಮಾರು 20 ದಿನಗಳ ಕಾಲ ಯೋಗ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದರು

ಶಿಬಿರದ ಸಮಾರೋಪ ಸಮಾರಂಭವನ್ನು ವಿಶ್ವಯೋಗ ದಿನಾಚರಣೆಯ ದಿನದಂದು ನಡೆಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕ ರೆ.ಫಾ.ವಿಜೋಯ್ ವರ್ಗೀಸ್ ದೀಪ ಬೆಳಗಿಸಿ ಉದ್ಘಾಟಿಸಿ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಎಸ್‌.ಡಿ.ಎಂ ಕಾಲೇಜಿನ ಫಾದರ್ ಜೋಬ್ ಅವರ ನೇತೃತ್ವದಲ್ಲಿ ನಾಲ್ಕು ವಿದ್ಯಾರ್ಥಿಗಳು ಪ್ರಾಣಾಯಾಮ ಯೋಗಭ್ಯಾಸ ನಡೆಸಿಕೊಟ್ಟರು.

ಪ್ರಾಂಶುಪಾಲರಾದ ಜಾರ್ಜ್.ಟಿ.ಎಸ್ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿ ಜೋಬಿನ್ ಕಾರ್ಯಕ್ರಮ ನಿರೂಪಿಸಿದರು. ಯೋಗ ಶಿಕ್ಷಕಿ ಅನನ್ಯ ವಂದಿಸಿದರು.

Leave a Reply

You May Have Missed

error: Content is protected !!