ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘ ರಚನೆ

ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘ ರಚನೆ

ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯು ಜೂ.26ರಂದು ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಪೃಥ್ವಿರಾಜ್, ಉಪಾಧ್ಯಕ್ಷರಾಗಿ ಪ್ರಥಮ ವಾಣಿಜ್ಯ ವಿಭಾಗದ ಪ್ರಖ್ಯಾತ್ ಗೌಡ, ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಗ್ರೀಷ್ಮ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನ ವಿಭಾಗದ ಶ್ರೀರಕ್ಷಾ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಆಂಟನಿ, ಕ್ರೀಡಾ ಕಾರ್ಯದರ್ಶಿಗಳಾಗಿ ದ್ವಿತೀಯ ವಾಣಿಜ್ಯ ವಿಭಾಗದ ಅಬೂಬಕ್ಕರ್ ಸಿದ್ದೀಕ್, ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ರಕ್ಕ್ಷಿತಾ ಶೆಟ್ಟಿ ಆಯ್ಕೆಗೊಂಡರು.

ಚುನಾವಣಾಧಿಕಾರಿಗಳಾಗಿ ಅರ್ಥಶಾಸ್ತ್ರ ಉಪನ್ಯಾಸಕರಾದ ಶಿವಪ್ರಸಾದ್.ಪಿ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕರಾದ ಗುಡ್ಡಪ್ಪ ಬಲ್ಯ ಅವರು ಚುನಾವಣಾ ಪ್ರಕ್ರಿಯೆಗಳನ್ನು ನೆರವೇರಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಚೇತನ್.ಎಂ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರಾದ ಗಣೇಶ್.ಕೆ ಸಹಕರಿಸಿದರು. ಆಯ್ಕೆಯಾದ ನೂತನ ವಿದ್ಯಾರ್ಥಿ ಸಂಘವನ್ನು ಪ್ರಾಚಾರ್ಯರಾದ ಚಂದ್ರಶೇಖರ.ಕೆ ಅಭಿನಂದಿಸಿದರು.

Leave a Reply

You May Have Missed

error: Content is protected !!