ಅಂಗನವಾಡಿ ಶಿಕ್ಷಕಿಯ ಜೊತೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ವ್ಯಕ್ತಿಯೋರ್ವನ್ನು ಬಂಧಿಸಿದ ಘಟನೆ ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ.
ಮಾವಿನಹಳ್ಳಿ ಗ್ರಾಮದ ಮಂಜು ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗ್ಗೆ ವಾಕಿಂಗ್ ಹೋಗುವ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಾ ತೋಟಕ್ಕೆ ಹೋಗುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಈ ವ್ಯಕ್ತಿಯನ್ನು ಹಿಡಿದ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿದ್ದಾರೆ.
ಅಂಗನವಾಡಿ ಶಿಕ್ಷಕಿಯ ಜೊತೆ ಅಸಭ್ಯ ವರ್ತನೆ ತೋರಿ ತೋಟದಲ್ಲಿ ಅವಿತು ಕುಳಿತಿದ್ದ ಕಾಮುಕ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೆಲ ದಿನಗಳಿಂದ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಈತನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಆಲೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.
























Leave a Reply