ನೆಲ್ಯಾಡಿ: ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ

ನೆಲ್ಯಾಡಿ: ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ

ನೆಲ್ಯಾಡಿ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯ ನೆಲ್ಯಾಡಿ ಶಾಖಾ ವ್ಯಾಪ್ತಿಯಯಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ 2024 ಯೋಜನೆಯಡಿಯಲ್ಲಿ ವಿದ್ಯುತ್ ಬಗೆಗಿನ ಮಾಹಿತಿ, ವಿದ್ಯುತ್ ಸುರಕ್ಷತೆ ಮತ್ತು ಅದರ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ವಿದ್ಯುತ್ ಸುರಕ್ಷತೆ ಮತ್ತು ಅದರ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಕೊಣಾಲು ಸರಕಾರಿ ಪ್ರೌಢಶಾಲೆ, ಇಚ್ಲಂಪಾಡಿ- ನೇರ್ಲ ಪ್ರಾಥಮಿಕ ಶಾಲೆ, ನೆಲ್ಯಾಡಿ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ನಡೆಸಲಾಯಿತು.

ನೆಲ್ಯಾಡಿ ಮೆಸ್ಕಾಂ ಕಿರಿಯ ಸಹಾಯಕ ಅಭಿಯಂತರರು ವಿದ್ಯುತ್ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!