ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ.

ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು ಕೋಲ್ಪೆಯಲ್ಲಿ ಲಾರಿ ನಿಲ್ಲಿಸಿ ಪಕ್ಕದ ಕ್ಯಾಂಟಿನ್ ವೊಂದರಲ್ಲಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರೊಂದು ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಲಕರಿಗೆ ಡಿಕ್ಕಿಯಾದ ಕಾರು ರಸ್ತೆ ಬದಿ ನಿಲ್ಲಿಸಿದ್ದ ಈಚರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ನಿಂತಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!