ಮನೆಯ ಬಾಗಿಲಿನ ಬೀಗ ಮುರಿದು 4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಮನೆಯ ಬಾಗಿಲಿನ ಬೀಗ ಮುರಿದು 4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ ಘಟನೆ ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ನಡೆದಿದೆ.

ಮನೆ ಮಂದಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮುಂಬಾಗಿಲ ಬೀಗ ಮುರಿದಿರುವ ಕುರಿತು ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ಅವರು ಒಳಗೆ ಹೋಗಿ ನೋಡಿದಾಗ ಕೋಣೆಯಲ್ಲಿದ್ದ ಕಪಾಟಿನಲ್ಲಿ ತಡಕಾಡಿ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಚಿನ್ನಾಭರಣ ದೋಚಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!