ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಪ್ರಯಾಣಿಕರು

ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಪ್ರಯಾಣಿಕರು

ಮಂಗಳೂರು: ಬಸ್ ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ವ್ಯಕ್ತಿಯೋರ್ವ ಕಿರುಕುಳ ನೀಡಿರುವ ಘಟನೆ ಬೆಂಗಳೂರು-ಮಂಗಳೂರು ಬಸ್ ನಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ.

ಬಾಲಕಿಕ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಬಾಲಕಿ ತನ್ನ ತಾಯಿಗೆ ತಿಳಿಸುತ್ತಿದ್ದಂತೆ ಬಾಲಕಿಯ ತಾಯಿ ಹಾಗೂ ಬಸ್ ನಲ್ಲಿದ್ದ ಇತರ ಪ್ರಯಾಣಿಕರು ವ್ಯಕ್ತಿಯನ್ನು ಹಿಡಿದಿದ್ದಾರೆ.

ಬಸ್ ನಿಲ್ಲಿಸುವಂತೆ ಹೇಳಿ ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಯಾಣಿಕರು ವ್ಯಕ್ತಿಗೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Leave a Reply

You May Have Missed

error: Content is protected !!