ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ವಿಧಿವಶ

ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು. ಪುನೀತ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು. ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದರೂ,ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಯಶಸ್ಸಾಗಲಿಲ್ಲ. ಆಸ್ಪತ್ರೆಗೆ ಮುಖ್ಯಮಂತ್ರಿ ಸೇರಿದಂತೆ ಪ್ರಮುಖರು ಭೇಟಿ ನೀಡಿದ್ದಾರೆ. ಪುನೀತ್, ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ 17 ಮಾರ್ಚ್,1975 ರಂದು ಜನಿಸಿದರು. ಪೂರ್ವ ಹೆಸರು ಲೋಹಿತ್. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು.
ನಟ ಪುನೀತ್ ರಾಜ್ ಕುಮಾರ್ ಎಂಬುದು ಕನ್ನಡಿಗರ ಹೆಮ್ಮೆ. ಅವರ ಈ ಅಗಲಿಕೆ ಕನ್ನಡದ ಅಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ.ಇವರ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

Leave a Reply

You May Have Missed

error: Content is protected !!