ಜು.18 ರಂದು ರೆಡ್‌ ಅಲರ್ಟ್‌: ಅಂಗನವಾಡಿಯಿಂದ ಪಿಯು ತನಕ ರಜೆ ಘೋಷಣೆ

ಜು.18 ರಂದು ರೆಡ್‌ ಅಲರ್ಟ್‌: ಅಂಗನವಾಡಿಯಿಂದ ಪಿಯು ತನಕ ರಜೆ ಘೋಷಣೆ

ಮಳೆ ಬಿರುಸು ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಜು.18ರಂದು ದ.ಕ. ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ಮಾತ್ರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ.

ಬುಧವಾರವೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ. ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

You May Have Missed

error: Content is protected !!