ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.19ರಂದು ರಜೆ

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.19ರಂದು ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.19 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ) ತರಗತಿಗಳಿಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ರೆಡ್ ಅಲರ್ಟ್:
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ.

Leave a Reply

You May Have Missed

error: Content is protected !!