ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವರಮಹಾಲಕ್ಷ್ಮೀ ಪೂಜಾ ಸಮಿತಿ ಆಯ್ಕೆ

ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವರಮಹಾಲಕ್ಷ್ಮೀ ಪೂಜಾ ಸಮಿತಿ ಆಯ್ಕೆ

ನೆಲ್ಯಾಡಿ: ಶ್ರೀರಾಮ ಶಾಲೆ ಸೂರ್ಯ ನಗರ ಇಲ್ಲಿ ವರಮಹಾಲಕ್ಷ್ಮಿ ಪೂಜೆಯ ಪೂರ್ವಭಾವಿ ಸಭೆಯು ಜು.18ರಂದು ನಡೆಯಿತು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿಯ ಸದಸ್ಯ ಸುಬ್ರಾಯ ಪುಣಚ, ಶಿಶುಮಂದಿರದ ಅಧ್ಯಕ್ಷ ಪುಷ್ಪಲತಾ ಜನಾರ್ಧನ್, ಶಾಲಾ ಮುಖ್ಯಶಿಕ್ಷಕ ಗಣೇಶ್ ವಾಗ್ಲೆ ಉಪಸ್ಥಿತರಿದ್ದರು.

ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ಸುಪ್ರೀತಾ ರವಿಚಂದ್ರ ಹೊಸವಕ್ಲು, ಕಾರ್ಯದರ್ಶಿಯಾಗಿ ಶ್ರೀಮತಿ ಪ್ರೀತಾರ ಅವರು ಆಯ್ಕೆಯಾದರು.

ಮಾತೃಮಂಡಳಿಯ ಸದಸ್ಯರು, ಪೋಷಕರು, ಶಿಕ್ಷಕರು ಶಿಕ್ಷಕರು. ಶ್ರೀಮತಿ ಶಾರದ ಸ್ವಾಗತಿಸಿ, ಶ್ರೀಮತಿ ವಿನ್ಯಶ್ರೀ ವಂದಿಸಿದರು, ಕುಮಾರಿ ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!