ಶಿರಾಡಿನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ

ಶಿರಾಡಿನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ

ಕರಾವಳಿ, ಮಲೆನಾಡು ಭಾಗದಲ್ಲಿ ವಿಪರೀತ ಮಳೆ, ಭೂಕುಸಿತ ಸಂಭವಿಸಿದ ಹಿನ್ನೆಲೆ ಬೆಂಗಳೂರಿನಿಂದ ಕರಾವಳಿ ಭಾಗಗಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ರಸ್ತೆಯಲ್ಲಿ ದಿನಪೂರ್ತಿ ವಾಹನ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ಹಾಸನ ಜಿಲ್ಲಾಡಳಿತ ವಾಪಸ್‌ ಪಡೆದು, ನಿರ್ಬಂಧಿತ ನಿಯಮಗಳಡಿ ವಾಹನ ಸಂಚಾರಕ್ಕೆ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಶಿರಾಡಿ ಘಾಟಿಯಲ್ಲಿ ಶನಿವಾರ (ನಾಳೆ)ದಿಂದ ಬೆಳಗ್ಗೆ 6ರಿಂದ ಸಂಜೆ 6ರ ತನಕ ಶಿರಾಡಿ ಹೆದ್ದಾರಿ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಕಲೇಶಪುರ ಉಪವಿಭಾಗಾಧಿಕಾರಿ ಶೃತಿ ತಿಳಿಸಿದ್ದಾರೆ. ರಾತ್ರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ನಿಷೇಧಿಸಿದೆ. ಗುರುವಾರ ಬೆಳಿಗ್ಗೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಸಂಭವಿಸಿ, ತಾತ್ಕಾಲಿಕ ತಡೆ ಹೇರಲಾಗಿತ್ತು.

Leave a Reply

You May Have Missed

error: Content is protected !!