ಲಾರಿಯ ಟಯರ್‌ ಬದಲಿಸುವಾಗ ಹೊರಚಿಮ್ಮಿದ ಡಿಸ್ಕ್: ವ್ಯಕ್ತಿಗೆ ಗಂಭೀರ ಗಾಯ

ಲಾರಿಯ ಟಯರ್‌ ಬದಲಿಸುವಾಗ ಹೊರಚಿಮ್ಮಿದ ಡಿಸ್ಕ್: ವ್ಯಕ್ತಿಗೆ ಗಂಭೀರ ಗಾಯ

ಲಾರಿಯೊಂದರ ಟಯರ್‌ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್‌ ಸಹಿತ ಕಾಂಪೌಂಡ್‌ ಗೆ ಎಸೆಯಲ್ಪಟ್ಟು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ವರದಿಯಾಗಿದೆ.

ಗಂಭೀರ ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ತನ್ನ ಬಾವನಿಗೆ ಸೇರಿದ ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಿದ್ದನ್ನು ಸರಿಪಡಿಸುವಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ನ ಡಿಸ್ಕ್‌ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್‌ ಗೆ ಎಸೆಯಲ್ಪಟ್ಟಿದ್ದಾರೆ. ತೀವ್ರ ಗಾಯಗೊಂಡ ರಶೀದ್‌ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲಾಗಿದ್ದು, ಘಟನೆಯ ಭೀಕರತೆಯನ್ನು ಸೆರೆಹಿಡಿದಿದೆ.

Leave a Reply

You May Have Missed

error: Content is protected !!