ನಿರಂತರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗುರುಳಿದ ಮರ; ಟ್ರಾಫಿಕ್ ಜಾಮ್

ನಿರಂತರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗುರುಳಿದ ಮರ; ಟ್ರಾಫಿಕ್ ಜಾಮ್

ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಭಾರಿ ಗಾತ್ರದ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಮಂಗಳೂರು- ಮೂಡಿಗೆರೆ ಸಂಪರ್ಕ ಕಡಿತಗೊಂಡಿದೆ.

ರಾ.ಹೆ.173ರ ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಹೆದ್ದಾರಿ ಉದ್ದಕ್ಕೂ ವಾಹನಗಳು ನಿಂತಿದ್ದು, ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ ಇತ್ತ ಪೊಲೀಸರು ವಾಹನ ಸವಾರರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಸದ್ಯ ಘಾಟಿ ಪ್ರದೇಶದಲ್ಲಿ ಬಿದ್ದಿರುವ ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಕಿಲೋಮೀಟರ್ ಗಟ್ಟಲೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿವೆ.

Leave a Reply

You May Have Missed

error: Content is protected !!