ಬಸ್ ನಲ್ಲಿ ಬೆಂಕಿ; ತಪ್ಪಿದ ಅಪಾಯ

ಬಸ್ ನಲ್ಲಿ ಬೆಂಕಿ; ತಪ್ಪಿದ ಅಪಾಯ

ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.31ರ ಬುಧವಾರ ಬೆಳಗ್ಗೆ ಸಂಭವಿಸಿದೆ.

ಸುಳ್ಯ‌ದ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದಿಂದ ಕೊಯನಾಡು ಭಾಗಕ್ಕೆ ತೆರಳಬೇಕಾಗಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡು, ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

ಘಟನೆ ಸಂಭವಿಸಿದ ತಕ್ಷಣ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು.

ಸ್ಥಳಕ್ಕೆ ಆಗಮಿಸಿದ ಸುಳ್ಯದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ, ಸಂಭಾವ್ಯ ಅಪಾಯ ತಪ್ಪಿಸಿದ್ದಾರೆ.

Leave a Reply

You May Have Missed

error: Content is protected !!