ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಎದೆನೋವು : ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಚಲಾಯಿಸಿದ ಚಾಲಕ

ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಎದೆನೋವು : ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಚಲಾಯಿಸಿದ ಚಾಲಕ

ಮಂಗಳೂರಿನಲ್ಲಿ ಮಂಗಳವಾರ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ ತೋರಿದ ಘಟನೆ ನಡೆದಿದೆ.

ಕೃಷ್ಣ ಪ್ರಸಾದ್ ಬಸ್ ಕೂಳೂರು ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತದ ಮುನ್ಸೂಚನೆ ದೊರಕಿತ್ತು. ಈ ವೇಳೆ ಗಂಭೀರತೆ ಅರಿತ ಬಸ್ ಚಾಲಕ ಹಾಗೂ ನಿರ್ವಾಹಕ ಗಜೇಂದ್ರ ಕುಂದರ್, ಮಹೇಶ್ ಪೂಜಾರಿ ಹಾಗೂ ಸುರೇಶ್ ಅವರು ಇತರ ಪ್ರಯಾಣಿಕರೊಂದಿಗೆ ಬಸ್ಸನ್ನು ಆ್ಯಂಬುಲೆನ್ಸ್ ಮಾದರಿಯಲ್ಲಿ ಸೈರನ್ ಹಾಕಿಕೊಂಡು 6ಕಿ.ಮೀ. ದೂರವನ್ನು 6ನಿಮಿಷದಲ್ಲಿ ಕ್ರಮಿಸಿ ವಿದ್ಯಾರ್ಥಿನಿಯನ್ನು ನಗರದ ಕಂಕನಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿನಿಗೆ ತಕ್ಷಣ ತುರ್ತು ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Leave a Reply

You May Have Missed

error: Content is protected !!