ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತ್ಯು

ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತ್ಯು

ಮಧ್ಯರಾತ್ರಿ ವೇಳೆ ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ.

ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಯುವಕರಾದ ಪವನ್ ಮತ್ತು ಮನೋಜ್ ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ರಾತ್ರಿ ಸುಮಾರು 9 ರಿಂದ 10 ಗಂಟೆಯ ನಡುವೆ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಸೋಮವಾರ ಬೆಳಿಗ್ಗೆ ಸ್ಥಳೀಯರ ಗಮನಕ್ಕೆ ಬಂದಿದೆ.

ಕೊಡಗು ಸಂಪಾಜೆ ಪೊಲೀಸ್ ಉಪಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!