ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ಲೋಹಿತ್.ಪಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ಲೋಹಿತ್.ಪಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ

ಕಡಬ: ವಿದ್ಯಾಭಾರತಿ ಕರ್ನಾಟಕ, ದ.ಕ.ಜಿಲ್ಲೆ ಇದರ ವತಿಯಿಂದ ದಿನಾಂಕ. ಅ.6ರಂದು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆದ 14ರ ವಯೋಮಾನದ ಜಿಲ್ಲಾಮಟ್ಟದ ಬಾಲವರ್ಗದ ಕರಾಟೆ ಸ್ಪರ್ಧೆಯಲ್ಲಿ ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಲೋಹಿತ್ ಪಿ. ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ಪ್ರಾಂತ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಕರಾಟೆ ಶಿಕ್ಷಕ ಯಾದವ ಬೀರಂತಡ್ಕ ತರಬೇತಿ ನೀಡಿರುತ್ತಾರೆ. ಇವರು ಕುಟ್ರುಪಾಡಿ ಗ್ರಾಮದ ಪುಂಡೈಕೋಡಿ ಬಾಲಕೃಷ್ಣ ಮತ್ತು ಆಶಾ ದಂಪತಿಯ ಪುತ್ರ. ಇವನಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Leave a Reply

You May Have Missed

error: Content is protected !!