ಸುಬ್ರಹ್ಮಣ್ಯ : ಪ್ರಥಮ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

ಸುಬ್ರಹ್ಮಣ್ಯ : ಪ್ರಥಮ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇವರ ಸಹಯೋಗದೊಂದಿಗೆ ಅ.12ರಂದು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಡಾ.ದಿನೇಶ್ ಪಿ.ಟಿ ಪ್ರಾಂಶುಪಾಲರು ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಅವರು ವಹಿಸಿದರು. ಮುಖ್ಯ ಅತಿಥಿಯಾಗಿ ವಿಮಲ ರಂಗಯ್ಯ ಪ್ರಾಕ್ತನ ಸಂಘದ ಸದಸ್ಯರು ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ ಅವರು ಉಪಸ್ಥಿತರಿದ್ದರು.

ಐ.ಕ್ಯೂ.ಎ ಸಿ ಸಂಯೋಜಕರಾದ ಲತಾ ಬಿ.ಟಿ ಕಾಲೇಜಿನ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಂಸ್ಥೆಗೆ ದಾಖಲಾದ ವಿದ್ಯಾರ್ಥಿಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕರು ಹಾಗೂ ಪ್ರಥಮ ಪದವಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಲತಾ ಕಮಿಲ ಸ್ವಾಗತಿಸಿದರು. ಆಂಗ್ಲಭಾಷೆ ವಿಭಾಗದ ಉಪನ್ಯಾಸಕರಾದ ಸೃಜನ್ ಮುಂಡೋಡಿ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿಯಾದ ಅಶ್ವಿನಿ ನಿರೂಪಿಸಿದರು.

Leave a Reply

You May Have Missed

error: Content is protected !!