ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಉಪ್ಪಿನಂಗಡಿ ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

17ವರ್ಷ ವಯೋಮಾನದ ವಿಭಾಗದಲ್ಲಿ ರೇಷ್ಮಾ ಪ್ರಥಮ ಸ್ಥಾನ, ಧನುಷಾ ಪಂಚಮ ಸ್ಥಾನ ಹಾಗೂ 14ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಅನುಪ್ ಮಧು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಅವರು , ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್ ಅವರು ಹಾಗೂ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಅಭಿನಂದಿಸಿದರು.

Leave a Reply

You May Have Missed

error: Content is protected !!