ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ನಿರ್ದೇಶಕ ರೆ.ಫಾ.ವಿಜೋಯ್ ವರ್ಗಿಸ್ ಅವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ದೇಶದ ಏಳಿಗೆಗೆ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಶಾಲಾ ಪ್ರಾಂಶುಪಾಲ ಜಾರ್ಜ್.ಟಿ.ಎಸ್ ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭನುಡಿಗಳನಿತ್ತರು. ವಿದ್ಯಾರ್ಥಿನಿ ನಿಶಾ.ಜಿ.ಎಸ್ ಅವರು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಿದರು.

ಶಾಲಾ ವಿದ್ಯಾರ್ಥಿಗಳಿಂದ ನೃತ್ಯ, ದೇಶಭಕ್ತಿ ಗೀತೆ ಸ್ಪರ್ಧೆ ಮುಂತಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲಾ ಮುಖ್ಯಗುರು ತೋಮಸ್ ಎ.ಕೆ, ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸಾನ್ವಿ.ಎಸ್.ಎಂ ನಿರೂಪಿಸಿದರು. ಸಫ್ರೀನಾ ಸ್ವಾಗತಿಸಿದರು. ವೀಕ್ಷಾ ವಂದಿಸಿದರು.

Leave a Reply

You May Have Missed

error: Content is protected !!