ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಶ್ರೀರಾಮ ಶಿಶುಮಂದಿರ, ಚಾಮುಂಡೇಶ್ವರಿ ಭಜನಾ ಮಂಡಳಿ ದೊಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಜರುಗಿತು.

ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಹಾಗೂ ಧಾರ್ಮಿಕ ಉಪನ್ಯಾಸಕರಾಗಿ ವಿವೇಕಾನಂದ ಪದವಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗ ಮುಖ್ಯಸ್ಥೆ ವಿಜಯ ಸರಸ್ವತಿಯವರು ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸುಪ್ರೀತಾ ರವಿಚಂದ್ರ ಹೊಸವಕ್ಲು ಅಧ್ಯಕ್ಷ ಸ್ಥಾನವನ್ನು ವಹಿಸಿದರು. ಶ್ರೀರಾಮ ವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಹಾಗೂ ಶ್ರೀರಾಮ ಶಿಶುಮಂದಿರದಅಧ್ಯಕ್ಷ ಪುಷ್ಪಲತಾ ಉಪಸ್ಥಿತರಿದ್ದರು.

ಬೆಳಿಗ್ಗೆ ಶ್ರೀ ವರಮಹಾಲಕ್ಷ್ಮಿ ಪೂಜೆಯಿಂದ ಆರಂಭಗೊಂಡು, ಧಾರ್ಮಿಕ ಸಭಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಮುಕ್ತಾಯಗೊಂಡಿತು.

ಊರ ಹಾಗೂ ಪರವೂರ ಮಾತೇಯರೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ಸುಪ್ರೀತಾ ರವಿಚಂದ್ರ ಸ್ವಾಗತಿಸಿದರು, ಪ್ರೀತಾರವರು ವಂದಿಸಿದರು. ಭಾಗೀರಥಿ ಕಾರ್ಯಕ್ರಮ ನಿರೂಪಿಸಿದರು.

Previous post

ನೆಲ್ಯಾಡಿ:ಕೆ .ಏನ್ .ಎಸ್ .ಎಸ್ ಕರ್ಕಾಟಕ ಮಾಸಾದ್ಯಂತ 31 ದಿನಗಳ ಕಾಲ ಏರ್ಪಡಿಸಲಾಗಿದ್ದ ರಾಮಾಯಣ ಪಾರಾಯಣ ಸಮಾಪ್ತಿ

Next post

ಗೋಳಿತಟ್ಟು ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶಾಲಾ ಶತಮಾನೋತ್ಸವ ಪ್ರಯುಕ್ತ ಕುಂಭ ನಿಧಿ ಉದ್ಘಾಟನೆ ಕಾರ್ಯಕ್ರಮ

Leave a Reply

You May Have Missed

error: Content is protected !!