ಹುಡುಗಿ ವಿಚಾರವೇ ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣಕ್ಕೆ ಕಾರಣ

ಹುಡುಗಿ ವಿಚಾರವೇ ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣಕ್ಕೆ ಕಾರಣ

ವಿಟ್ಲ: ಇಲ್ಲಿನ ಉರಿಮಜಲು ಜಂಕ್ಷನ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹುಡುಗಿಯ ಕಾರಣಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಇರಿತದಿಂದ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಆರೋಪಿಯಾಗಿದ್ದು, ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶರೀಫ್ ಉರಿಮಜಲು ಜಂಕ್ಷನ್‌ಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಹಾಫೀಲ್ ಮಾತಿಗೆ ಇಳಿದಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಆರೋಪಿ ಶರೀಫ್ ಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಹುಡುಗಿ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದು ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!