ಡಾ.ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟಿದ ನಟಿ ಶ್ರುತಿ

ಡಾ.ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟಿದ ನಟಿ ಶ್ರುತಿ

ನಟಿ ಶ್ರುತಿ ಶ್ರೀಮಂಜುನಾಥ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ರಕ್ಷಾ ಬಂಧನದ ನಿಮಿತ್ತ ಶ್ರೀ ಕ್ಷೇತ್ರ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರಿಗೆ ರಾಖಿ ಕಟ್ಟಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ನಿನ್ನೆ ರಕ್ಷಾ ಬಂಧನದ ದಿನ ಅವರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ್ ನಿಮ್ಮೆಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಇನ್​ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ.

ಶೃತಿ ಅವರು ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಪುತ್ರಿ ಗೌರಿ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ದೇವರ ದರ್ಶನ ಪಡೆದುಕೊಂಡು ಅದರ ಜೊತೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನೂ ಸಹ ಭೇಟಿಯಾಗಿದ್ದಾರೆ. ರಕ್ಷಾ ಬಂಧನದ ಹಿನ್ನೆಲೆಯಲ್ಲಿ ನಟಿ ಶ್ರುತಿ ವೀರೇಂದ್ರ ಹೆಗ್ಗಡೆಯವರ ಕೈಗೆ ರಾಖಿ ಕಟ್ಟಿ ಆಶೀರ್ವಾದ ಪಡೆಯುವ ಮೂಲಕ ವಿಶೇಷವಾಗಿ ರಕ್ಷಾಬಂಧನವನ್ನ ಆಚರಿಸಿದ್ದಾರೆ.

Leave a Reply

You May Have Missed

error: Content is protected !!