ನೆಲ್ಯಾಡಿ ಜೆಸಿಐ ವತಿಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

ನೆಲ್ಯಾಡಿ ಜೆಸಿಐ ವತಿಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

ನೆಲ್ಯಾಡಿ ಜೆಸಿಐ ವತಿಯಿಂದ ಒಂದು ವಾರಗಳ ಕಾಲ ನಡೆಯುವ ತರಬೇತಿ ಸಪ್ತಾಹ ಇದರ ಉದ್ಘಾಟನಾ ಸಮಾರಂಭವನ್ನು ಆ.25ರಂದು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಯಿತು.

ಜನಜಾಗೃತಿ ವೇದಿಕೆಯ ಜಿಲ್ಲಾ ತರಬೇತಿದಾರ ಗಣೇಶ್ ಆಚಾರ್ಯ ಅವರು ತರಬೇತಿ ಸಪ್ತಾಹವನ್ನು ಉದ್ಘಾಟಿಸಿ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸ್ವಸ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾತನಾಡಿ ಮಕ್ಕಳಿಗೆ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರ.ಜೆ.ಬಂಟ್ರಿಯಾಲ್. ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೇದಪ್ಪ, ಪ್ರಿನ್ಸಿಪಾಲ್ ಎಲಿಯಾಸ್. ನೆಲ್ಯಾಡಿ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಜೇಸಿಐನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply

You May Have Missed

error: Content is protected !!