ಸೌತಡ್ಕ ದೇವಸ್ಥಾನದಲ್ಲಿ ಗಣೇಶೋತ್ಸವ ಆಚರಣೆಯ ಪೂರ್ವಭಾವಿ ಸಭೆ

ಸೌತಡ್ಕ ದೇವಸ್ಥಾನದಲ್ಲಿ ಗಣೇಶೋತ್ಸವ ಆಚರಣೆಯ ಪೂರ್ವಭಾವಿ ಸಭೆ

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ ಹಾಗೂ ಮ್ಯಾನೇಜರ್ ರಾಮಕೃಷ್ಣ ಶಬರಾಯ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಸಾರ್ವಜನಿಕರ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿಯನ್ನು ವಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಪ್ರಶಾಂತ್ ರೈ, ಅಣ್ಣಪ್ಪ ಕಾಶಿ, ನಾರಾಯಣ ಗೌಡ, ವಿಠಲ, ಪುರಂದರ, ಪ್ರಶಾಂತ, ಮಾಜಿ ತಾಲೂಕು ಪಂಚಾಯತಿ ಸದಸ್ಯ ಲಕ್ಷ್ಮಿನಾರಾಯಣ, ಕೊಕ್ಕಡ ಪಂಚಾಯಿತಿನ ಸದಸ್ಯ ಯೋಗೀಶ್ ಆಲಂಬಿಲ, ಡಾ.ಮೋಹನ್ ದಾಸ್ ಗೌಡ, ದಾಮೋದರ ಶೆಟ್ಟಿ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ ಸ್ವಾಗತಿಸಿ, ವಂದಿಸಿದರು.

Leave a Reply

You May Have Missed

error: Content is protected !!