ತೋಡಿಗೆ ಬಿದ್ದು ಯುವಕ ಸಾವು

ತೋಡಿಗೆ ಬಿದ್ದು ಯುವಕ ಸಾವು

ಕಡಬ: ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದ ಪೇರಡ್ಕದಲ್ಲಿ ಮೀನಾಡಿ ಸಮೀಪದ ದೋಳ ನಿವಾಸಿ ಉಮೇಶ (35) ಅವರು ನೀರು ತುಂಬಿದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಕೂಲಿಕಾರ್ಮಿಕರಾಗಿದ್ದ ಅವರು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು.

ಸಂಜೆ ಸುಮಾರು ಒಂದು ಕಿ.ಮೀ. ದೂರದ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!