ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಕಡಬ ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕ ವಂ.ಪ್ರಕಾಶ್ ಪೌಲ್ ಡಿ ಸೋಜಾ ಶಿಕ್ಷಕ ವೃತ್ತಿ ಬಹಳ ಶ್ರೇಷ್ಠ ವೃತ್ತಿ. ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವವಾಗಿದೆ. ಅದಲ್ಲದೆ ಒಂದು ದೇಶವನ್ನು ಕಟ್ಟಲು ಸಹ ಶಿಕ್ಷಕರ ಪಾತ್ರ ಬಹಳ ಮಹತ್ವವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಸ್ಥರುಗಳಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಕಿರಣ್ ಕುಮಾರ್, ಶ್ರೀಲತಾ, ಸಿಸ್ಟರ್ ಹಿಲ್ದಾ ರೋಡ್ರಿಗಸ್, ದಕ್ಷ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ನಂತರ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿಶೇಷ ಉಡುಗೊರೆಗಳನ್ನು ನೀಡಿ ಶುಭಾಶಯ ತಿಳಿಸಿದರು.

Leave a Reply

You May Have Missed

error: Content is protected !!