ನಿಡ್ಲೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಮ್ಮಿಲನ

ಕೊಕ್ಕಡ: ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಹಿರಿಯ ವಿದ್ಯಾರ್ಥಿಗಳು ಪರಸ್ಪರ ತಮ್ಮ ಪರಿಚಯದೊಂದಿಗೆ ಶಾಲೆಯಲ್ಲಿ ಕಲಿತ ದಿನಗಳನ್ನು ಮೆಲಕು ಹಾಕಿದರು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರಾಜಗುರು ಹೆಬ್ಬಾರ್, ಉಪಾಧ್ಯಕ್ಷರಾಗಿ ಕೃಷ್ಣಪ್ರಸಾದ್, ಕಾರ್ಯದರ್ಶಿಯಾಗಿ ಜಗದೀಶ ಶೆಟ್ಟಿ, ಉಪಕಾರ್ಯದರ್ಶಿಯಾಗಿ ಯುವರಾಜ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಶೆಟ್ಟಿ, ಪದನಿಮಿತ್ತ ಕಾರ್ಯದರ್ಶಿಯಾಗಿ ಶಾಂತ ಶೆಟ್ಟಿ ಕಾರ್ಯನಿರ್ವಹಿಸುತ್ತಾರೆ.

ಆಂಗ್ಲಭಾಷಾ ಶಿಕ್ಷಕಿ ಶೋಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಸುವರ್ಣ ಸಂಭ್ರಮದಿಂದ 10ವರ್ಷಗಳ ಕಾಲ ಸಂಘದ ಅಧ್ಯಕ್ಷ ಲಕ್ಷ್ಮಿನಾರಾಯಣ ಭಟ್ ಶುಭ ಹಾರೈಸಿದರು. ನೂತನ ಅಧ್ಯಕ್ಷ ರಾಜಗುರು ಹೆಬ್ಬಾರ್ ಅವರು ಎಲ್ಲರ ಸಹಕಾರವನ್ನು ಕೋರಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಶಾಂತಾ ಸ್ವಾಗತಿಸಿದರು. ಸುಚಿತ್ರ ವಂದಿಸಿದರು. ಶರತ್ ಕುಮಾರ್ ತುಳುಪುಳೆ ಕಾರ್ಯಕ್ರಮ ನಿರೂಪಿಸಿದರು.






















Leave a Reply