ಕೆಎಸ್‌ಆರ್‌ಟಿಸಿ ಬಸ್ಸು -ಟ್ಯಾಂಕರ್ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ಕೆಎಸ್‌ಆರ್‌ಟಿಸಿ ಬಸ್ಸು -ಟ್ಯಾಂಕರ್ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೆ.23ರಂದು ಸಂಜೆ ನಡೆದಿದೆ.

ಮಂಗಳೂರುನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20ಜನರಿಗೆ ಗಾಯಗಳಾಗಿದ್ದು ಈ ಪೈಕಿ ಕೆಲವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ, ಬಸ್ ಚಾಲಕ ಹಾಗೂ ನಿರ್ವಾಹಕ ಅವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ, ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಸಹಪ್ರಯಾಣಿಕನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Leave a Reply

You May Have Missed

error: Content is protected !!