ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮತ್ತು ರಾಜ್ಯಮಟ್ಟಕ್ಕೆ ವಿವಿಧ ಪಂದ್ಯಾಟಗಳಿಗೆ ಆಯ್ಕೆಯಾಗಿರುತ್ತಾರೆ.

ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಕುಮಾರಿ ಹರ್ಷ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ, ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಗುರುಕಿರಣ್ ದ್ವಿತೀಯ ಪಿಯುಸಿ ಕಲಾವಿಭಾಗ, ರಶ್ಮಿತಾ ಪ್ರಥಮ ಪಿಯುಸಿ ಕಲಾ ವಿಭಾಗ ಹಾಗೂ ಕವನಶ್ರೀ ಪ್ರಥಮ ಪಿಯುಸಿ ಕಲಾ ವಿಬಾಗ, ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ರಮ್ಯಾ ಪ್ರಥಮ ಪಿಯುಸಿ ಕಲಾ ವಿಭಾಗ ಮತ್ತು ವಿಜೇತ ಪ್ರಥಮ ಪಿಯುಸಿ ಕಲಾ ವಿಭಾಗ ಇವರು ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕರಾಗಿರುವ ಶ್ರೀ ಮಹಮ್ಮದ್ ಹಾರಿಸ್ ಅವರಿಗೆ ವಿದ್ಯಾಸಂಸ್ಥೆಯ ಸಂಚಾಲಕ ರೆ.ಫಾ.ನೋಮಿಸ್ ಕುರಿಯಕೋಸ್, ಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗಿಸ್, ಕಾಲೇಜಿನ ಪ್ರಾಚಾರ್ಯ ಎಂ.ಕೆ ಏಲಿಯಾಸ್, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅವರು ಅಭಿನಂದನೆ ಸಲ್ಲಿಸಿ ಗೌರವಿಸಿದರು.

Previous post

ಸೇವಾ ಮನೋಭಾವನೆ ಹಾಗೂ ರಾಷ್ಟ್ರಪ್ರೇಮ ಬೆಳೆಸಿಕೊಳ್ಳುವುದಕ್ಕೆ ಎನ್ನೆಸ್ಸೆಸ್ ಉತ್ತಮ ವೇದಿಕೆ – ಪ್ರೊ.ವಿಶ್ವನಾಥ ಪಿ.

Next post

ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕರಾಟೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Leave a Reply

You May Have Missed

error: Content is protected !!