ನೆಲ್ಯಾಡಿ ವಿವಿ ಕಾಲೇಜಿನ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ

ನೆಲ್ಯಾಡಿ ವಿವಿ ಕಾಲೇಜಿನ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ

ನೆಲ್ಯಾಡಿ ವಿವಿ ಘಟಕ ಕಾಲೇಜಿನ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ ಸೆ.25 ರಂದು ನಡೆಯಿತು.

ಸಂತ ಜಾರ್ಜ್ ವಿದ್ಯಾಸಂಸ್ಥೆಯ ವಾಣಿಜ್ಯ ವಿಭಾಗದ ಉಪನ್ಯಾಸಕಿ ಗೀತಾ ಅವರು ಉದ್ಘಾಟಿಸಿ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಬೇಕಾದ ಕೌಶಲ್ಯ, ಮಾರ್ಗದರ್ಶನ ಹಾಗೂ ರೂಪುರೇಷೆಗಳನ್ನು ನೀಡುವಲ್ಲಿ ವಾಣಿಜ್ಯ ಸಂಘವು ಬಹು ಮುಖ್ಯ ಪಾತ್ರ ವಹಿಸುತ್ತದೆ, ಅದರ ಪ್ರಯೋಜನ ಪಡೆದುಕೊಂಡು ಜೀವನದಲ್ಲಿ ಯಶಸ್ವಿಯಾಗಿ ಮುನ್ನಡೆಯಿರಿ ಎಂದು ಶುಭ ಹಾರೈಸಿದರು.

ಕಾಲೇಜಿನ ಸಹಸಂಯೋಜಕ ಡಾ.ಸೀತಾರಾಮ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ವಿವಿ ವಾಣಿಜ್ಯ ವಿಭಾಗದ ಮುಖ್ಯಸ್ಥ ವೆರೋನಿಕಾ ಪ್ರಭ ಅವರು ಪ್ರಾಸ್ತಾವಿಕ ನುಡಿಗಳ್ನಾಡಿದರು.

ಪಾವನ ಸ್ವಾಗತಿಸಿದರು. ವಿದ್ಯಾರ್ಥಿನಿ ಸಹನ ವಂದಿಸಿದರು, ಅವಮ್ಮ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!